alex Certify ಚರ್ಚೆ ನಡೆಯುತ್ತಿದ್ದಾಗಲೇ ಪ್ರಜ್ಞೆ ತಪ್ಪಿ ಬಿದ್ದ ನಿರೂಪಕಿ; ತಕ್ಷಣವೇ ನೆರವಿಗೆ ಧಾವಿಸಿದ ರಿಷಿ ಸುನಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಚೆ ನಡೆಯುತ್ತಿದ್ದಾಗಲೇ ಪ್ರಜ್ಞೆ ತಪ್ಪಿ ಬಿದ್ದ ನಿರೂಪಕಿ; ತಕ್ಷಣವೇ ನೆರವಿಗೆ ಧಾವಿಸಿದ ರಿಷಿ ಸುನಕ್

ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್, ಬ್ರಿಟನ್ ಪ್ರಧಾನಿ ಪಟ್ಟಕ್ಕೇರುವ ಸನಿಹದಲ್ಲಿದ್ದಾರೆ. ಈಗಾಗಲೇ ಅವರು ಮೂರು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದು, ಅವರ ಆಯ್ಕೆ ಬಹುತೇಕ ಖಚಿತವೆಂದು ಹೇಳಲಾಗುತ್ತಿದೆ.

ಇದರ ಮಧ್ಯೆ, ಬ್ರಿಟನ್ ಪ್ರಧಾನಿ ಅಭ್ಯರ್ಥಿಗಳೊಂದಿಗಿನ ಚುನಾವಣಾ ಚರ್ಚೆಯ ವೇಳೆ ಕಾರ್ಯಕ್ರಮದ ನಡುವೆ ಟಿವಿ ನಿರೂಪಕಿ ಪ್ರಜ್ಞೆ ತಪ್ಪಿ ಬಿದ್ದ ಸಂದರ್ಭದಲ್ಲಿ ತಕ್ಷಣವೇ ಅವರ ನೆರವಿಗೆ ಧಾವಿಸುವ ಮೂಲಕ ರಿಷಿ ಸುನಕ್ ಮಾನವೀಯತೆ ಮೆರೆದಿದ್ದಾರೆ.

ಮಂಗಳವಾರದಂದು ಈ ಘಟನೆ ನಡೆದಿದ್ದು ‘ದಿ ಸನ್’ ಮತ್ತು ‘ಟಾಕ್ ಟಿವಿ’ ಜಂಟಿಯಾಗಿ ಚರ್ಚೆಯನ್ನು ಆಯೋಜಿಸಿದ್ದವು. ಇದರಲ್ಲಿ ರಿಷಿ ಸುನಕ್ ಹಾಗೂ ಲಿಜ್ ಟ್ರಸ್ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ಅನಾರೋಗ್ಯಕ್ಕೊಳಗಾದ ನಿರೂಪಕಿ ಕೇಟ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ರಿಷಿ ಸುನುಕ್ ಅವರ ನೆರವಿಗೆ ಧಾವಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...