
ಚಲಿಸುತ್ತಿದ್ದ ಮಾರುತಿ ಓಮ್ನಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಟ್ಟು ಕರಕಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು ಸಮೀಪ ನಡೆದಿದೆ.
ಮಹಮ್ಮದ್ ಅರ್ಷದ್ ಎಂಬವರು ತರೀಕೆರೆಯಿಂದ ಶಿವಮೊಗ್ಗದ ಕಡೆ ಬರುವ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅವರು ಕಾರು ನಿಲ್ಲಿಸಿ ಕೆಳಗೆ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಗ್ಯಾಸ್ ನಲ್ಲಿ ಕಾರು ಚಲಾಯಿಸಿಕೊಂಡು ಅವರು ಬರುತ್ತಿದ್ದಾಗ ಗ್ಯಾಸ್ ಖಾಲಿಯಾಗಿದೆ ಎನ್ನಲಾಗಿದ್ದು, ಪೆಟ್ರೋಲ್ ಗೆ ಬದಲಾಯಿಸಿ ಚಾಲನೆ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.