alex Certify ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ….! ಆರೋಪಿಗಳ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ….! ಆರೋಪಿಗಳ ಬಂಧನ

ಚಲಿಸುತ್ತಿರುವ ಕಾರಿನಲ್ಲಿ 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರಗೈದಿದ್ದ ಕಾಮುಕರನ್ನು ಹೆಡೆಮುರಿ ಕಟ್ಟಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಶ್ಚಿಮ ದೆಹಲಿಯ ಹರಿ ನಗರದಲ್ಲಿ ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿತ್ತು.

ಹರಿ ನಗರ ಠಾಣೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಮಹಿಳೆ ಒಂಟಿಯಾಗಿ ಬರುತ್ತಿರೋದನ್ನು ಕಾಮುಕರು ಗಮನಿಸಿದ್ದಾರೆ. ಮೊದಲೇ ಪಾನಮತ್ತರಾಗಿದ್ದ ಕಾಮುಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಕಾರಿನೊಳಕ್ಕೆ ಎಳೆದು ಅತ್ಯಾಚಾರಗೈದಿದ್ದಾರೆ. ಈ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ರಂಹೋಲಾದಲ್ಲಿರುವ ಅತ್ಯಾಚಾರಿಗಳ ಮನೆಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಸೋಮವಾರ ಹರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಅವರ ಮನೆಗೆಳಿಗೇ ತೆರಳಿ ಬಂಧಿಸಿದ್ದೇವೆ. ಶಂಕಿತರು ಮದ್ಯಪಾನ ಮಾಡಿದ್ದು ಮದ್ಯದ ಏಟಿನಲ್ಲಿ ಈ ಕೃತ್ಯ ಎಸಗಿದ್ದಾರೆ. ಆರೋಪಿಗಳ ವಿರುದ್ಧ ಅತ್ಯಾಚಾರ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...