alex Certify ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್​ ಬಳಿಕ ಖಾಕಿ ಅಲರ್ಟ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್​ ಬಳಿಕ ಖಾಕಿ ಅಲರ್ಟ್​

ಚಲಿಸುತ್ತಿದ್ದ ಬಸ್​​ನಲ್ಲಿದ್ದ ವಿದ್ಯಾರ್ಥಿನಿಯರು ಮದ್ಯಪಾನ ಸೇವಿಸಿದ ಘಟನೆಯು ತಮಿಳುನಾಡು ಚೆಂಗಾಲಪಟ್ಟು ಜಿಲ್ಲೆಯಲ್ಲಿ ನಡೆದಿದ್ದು ಈ ವಿಡಿಯೋ ವೈರಲ್​ ಆಗಿದೆ.
ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳ ಗುಂಪು ಬಿಯರ್​ ಬಾಟಲಿಯನ್ನು ಕೈಯಲ್ಲಿ ಹಿಡಿದು ಸೇವಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ಎಲ್ಲಾ ವಿದ್ಯಾರ್ಥಿಗಳು ಚೆಂಗಲ್ಪಟ್ಟುವಿನ ಸರ್ಕಾರಿ ಶಾಲೆಗೆ ಸೇರಿದವರು ಎನ್ನಲಾಗಿದೆ.
ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿಗಳು ತಿರುಕಝಕುಂದ್ರಂನಿಂದ ತಾಚೂರ್​ಗೆ ತೆರಳುತ್ತಿದ್ದ ಬಸ್​ನಲ್ಲಿದ್ದರು. ಈ ಘಟನೆಯು ಅಧಿಕಾರಿಗಳ ಗಮನಕ್ಕೆ ಬಂದಿದ್ದು ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...