alex Certify ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸಿ ಹಳಿಗೆ ಬಿದ್ದ ಪ್ರಯಾಣಿಕನ ರಕ್ಷಿಸಿದ ರೈಲ್ವೇ ಉದ್ಯೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸಿ ಹಳಿಗೆ ಬಿದ್ದ ಪ್ರಯಾಣಿಕನ ರಕ್ಷಿಸಿದ ರೈಲ್ವೇ ಉದ್ಯೋಗಿ

Alert Railway Employee Saves Passenger From Being Run Over by Moving Train  | Watchಕಲ್ಯಾಣ್: ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸುತ್ತಿದ್ದಾಗ ಫ್ಲಾಟ್ ಫಾರ್ಮ್ ನಡುವೆ ಬಿದ್ದಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಉದ್ಯೋಗಿಯೊಬ್ಬರು ರಕ್ಷಿಸಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನವೆಂಬರ್ 14 ರಂದು ಕಲ್ಯಾಣ್ ರೈಲು ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸಿದ ಪ್ರಯಾಣಿಕರೊಬ್ಬರು, ಫ್ಲಾಟ್ ಫಾರ್ಮ್ ನಡುವೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಕಲ್ಯಾಣ್ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡುವ ಪಾಯಿಂಟ್‌ಮ್ಯಾನ್ ಶಿವಜಿ ಸಿಂಗ್ ತಕ್ಷಣ ಆತನ ರಕ್ಷಣೆಗೆ ಬಂದಿದ್ದು, ಪ್ರಯಾಣಿಕನನ್ನು ರಕ್ಷಿಸಿದ್ದಾರೆ.

ಘಟನೆಯ ವಿಡಿಯೋವನ್ನು ಸೆಂಟ್ರಲ್ ರೈಲ್ವೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಅಂದಿನಿಂದ ಈ ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ನೆಟ್ಟಿಗರು ಶಿವಜಿಯನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಇಂತಹ ಘಟನೆಗಳ ಬಗ್ಗೆ ನೆಟ್ಟಿಗರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...