
ಮೆಡಿಕಲ್ ವಿದ್ಯಾರ್ಥಿನಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ.
ಕೊಪ್ಪಳ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ 22 ವರ್ಷದ ತೇಜಶ್ರೀ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈಕೆ ಮೂಲತಃ ಬಳ್ಳಾರಿ ಜಿಲ್ಲೆಯವರೆಂದು ಹೇಳಲಾಗಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತೇಜಶ್ರೀ ಈ ಕಾರಣಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಗದಗ ರೈಲ್ವೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.