alex Certify ಚಾಮರಾಜನಗರಕ್ಕೂ ಕಾಲಿಟ್ಟ ಮಹಾಮಾರಿ; ವೈದ್ಯಕೀಯ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರಕ್ಕೂ ಕಾಲಿಟ್ಟ ಮಹಾಮಾರಿ; ವೈದ್ಯಕೀಯ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಹೊಸ ರೂಪಾಂತರ ವೈರಸ್ ಭೀತಿ ಬೆನ್ನಲ್ಲೇ ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದೆ.

ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟಗೊಡಿದ್ದು, 300ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ ಮತ್ತೊಂದು ವೈದ್ಯಕೀಯ ಕಾಲೇಜಿನಲ್ಲಿ ಮಹಾಮಾರಿ ಅಟ್ಟಹಾಸ ಆರಂಭವಾಗಿದೆ. ಚಾಮರಾಜನಗರ ವೈದ್ಯಕೀಯ ಕಾಲೇಜಿನ 9 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

ಚಾಮರಾಜನಗರ ತಾಲೂಕಿನ ಯಡಪುರ ಬಳಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತ ವಿದ್ಯಾರ್ಥಿಗಳನ್ನು ಸಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...