ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಇಂತಹ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ ಇದು ದುಃಖಕರ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೊಮ್ಮಾಯಿ, ಚಾಮರಾಜನಗರ ಆಸ್ಪತ್ರೆಯಲ್ಲಿ 24 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದತೆ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.
ಇವು ಸಾವೋ ಕೊಲೆಯೋ…? ವ್ಯವಸ್ಥೆ ಎಚ್ಚರಗೊಳ್ಳಲು ಇನ್ನೆಷ್ಟು ಜೀವ ಬಲಿಯಾಗಬೇಕು…? ಕಾಂಗ್ರೆಸ್ ಆಕ್ರೋಶದ ಪ್ರಶ್ನೆ
ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೆಳಲಾಗುತ್ತಿದೆ. ಆದರೆ ಅವರ ಸಾವಿಗೆ ನಿಜವಾಗಿಯೂ ಇದ್ದ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಬೇಕಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.