alex Certify ಚಾಮರಾಜನಗರ ದುರಂತ ಬೆನ್ನಲ್ಲೇ ತುರ್ತು ಸಂಪುಟ ಸಭೆ ಕರೆದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರ ದುರಂತ ಬೆನ್ನಲ್ಲೇ ತುರ್ತು ಸಂಪುಟ ಸಭೆ ಕರೆದ ಸಿಎಂ

ಬೆಂಗಳೂರು: ಚಾಮರಾಜನಗರದಲ್ಲಿ ಭೀಕರ ಆಕ್ಸಿಜನ್ ದುರಂತ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿರುವ ದುರಂತದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ಆಸ್ಪತ್ರೆಯಲ್ಲಿನ ಸಮಸ್ಯೆ, ಆಕ್ಸಿಜನ್ ಕೊರತೆ, ಬೆಡ್ ವ್ಯವಸ್ಥೆ, ಚಿಕಿತ್ಸೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಚಾಮರಾಜನಗರದಲ್ಲಿ 24 ಗಂಟೆಯಲ್ಲಿ 22 ಅಲ್ಲ, 24 ರೋಗಿಗಳ ಸಾವು; ಎಲ್ಲವೂ ಆಕ್ಸಿಜನ್ ಕೊರತೆಯಿಂದಲ್ಲ ಎಂದ ಸಚಿವ

ಈ ನಡುವೆ ತಮ್ಮದೇ ಉಸ್ತುವಾರಿ ಜಿಲ್ಲೆಯಲ್ಲಿ ದುರಂತ ಸಂಭವಿಸುತ್ತಿದ್ದರೂ ಈ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿದ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಸಿಎಂ ಗರಂ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...