ಮೈಸೂರು: ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಪ್ರತಿ ವರ್ಷ ಭಕ್ತಾದಿಗಳು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಚಾಲೇಂಜಿಂಗ್ ಸ್ಟಾರ್ ದರ್ಶನ್ ಗೂ ಈ ಬಾರಿ ಬೆಟ್ಟಕ್ಕೆ ತೆರಳಲು ಅನುಮತಿ ನಿರಾಕರಿಸಲಾಗಿದೆ.
ಪ್ರತಿ ವರ್ಷ ನಟ ದರ್ಶನ್ ಆಷಾಡ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಆದರೆ ಈ ಬಾರಿ ಕೋವಿಡ್ ನಿಯಮಗಳ ಪ್ರಕಾರ ದರ್ಶನಗೂ ಅನುಮತಿ ನಿರಾಕರಿಸಲಾಗಿದೆ. ವಿವಾದಗಳ ಸುಳಿಯಲ್ಲಿ ಸಿಲುಕಿರುವ ನಟ ದರ್ಶನ್ ನಿನ್ನೆ ಮೈಸೂರಿಗೆ ತೆರಳಿದ್ದು, ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆಯಲು ಮುಂದಾಗಿದ್ದರು.
BIG NEWS: ಇಂದ್ರಜಿತ್ ಲಂಕೇಶ್ ಮನೆಗೆ ಬಿಗಿ ಪೊಲೀಸ್ ಭದ್ರತೆ
ಇನ್ನು ತಾವರಕಟ್ಟೆ ಮುಖ್ಯದ್ವಾರದ ಬಳಿ ಬ್ಯಾರಿಕೇಡ್ ಗಳನ್ನು ಅಳವಡಿಸಿರುವ ಪೊಲೀಸರು, ಭಕ್ತರು ಬೆಟ್ಟಕ್ಕೆ ತೆರಳದಂತೆ ನಿರ್ಬಂಧ ವಿಧಿಸಿದ್ದಾರೆ.