ಇಂಧನ ದರ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಕೆಲವೊಂದು ರಿಯಾಯಿತಿಗಳನ್ನು ನೀಡುತ್ತಿದೆ.
ಇದರ ಮಧ್ಯೆ ಅಲ್ಲಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡುವಾಗ ಬೆಂಕಿ ಹೊತ್ತಿಕೊಳ್ಳುವುದು, ಚಲಿಸುವಾಗಲೇ ಬೆಂಕಿ ಕಾಣಿಸಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೀಗ ಮತ್ತೊಂದು ಇಂತಹುದೇ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಬೊಂದೆಲ್ ಕೆಎಚ್ ಕಾಲೋನಿಯಲ್ಲಿ ಕೊಮಾಕಿ ಕಂಪನಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರನ್ನು ಮಾಲೀಕರು ತಮ್ಮ ಮನೆ ಅಂಗಳದಲ್ಲಿ ಚಾರ್ಜಿಗೆ ಹಾಕಿದ್ದ ವೇಳೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ. ಇದರ ಪರಿಣಾಮ ಸ್ಕೂಟರ್ ಸಂಪೂರ್ಣವಾಗಿ ಭಸ್ಮವಾಗಿದೆ ಎನ್ನಲಾಗಿದೆ.