ಈಗ ಮಳೆಗಾಲ ಆರಂಭವಾಗಿದ್ದು, ವಾಹನ ಚಾಲನೆ ಮಾಡುವವರು ಅತಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅದರಲ್ಲೂ ಘಾಟ್ ಪ್ರದೇಶದಲ್ಲಿ ಸಂಚರಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕಾಗುತ್ತದೆ. ಇದರ ಮಧ್ಯೆಯೂ ಕೆಲವರು ಪ್ರಕೃತಿ ಸೌಂದರ್ಯ ಸವಿಯಲು ರಸ್ತೆ ಮಧ್ಯದಲ್ಲಿ ವಾಹನ ನಿಲ್ಲಿಸುತ್ತಾರೆ ಅಂತವರಿಗೊಂದು ಮಹತ್ವದ ಮಾಹಿತಿ ಇಲ್ಲಿದೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ 33 ಸ್ಥಳಗಳನ್ನು ಅಪಾಯಕಾರಿ ಎಂದು ಗುರುತಿಸಲಾಗಿದ್ದು, ಈ ಪೈಕಿ 4 ಅತಿ ಅಪಾಯಕಾರಿ, 13 ಸಾಮಾನ್ಯ ಹಾಗೂ 16 ಕಡಿಮೆ ಅಪಾಯವುಳ್ಳ ಸ್ಥಳಗಳೆಂದು ಪರಿಗಣಿಸಲಾಗಿದೆ.
ಹೀಗಾಗಿ ಈ ಹೆದ್ದಾರಿಯಲ್ಲಿ ಸಂಚರಿಸುವವರು ಹೆದ್ದಾರಿ ನಡುವೆ ವಾಹನ ನಿಲ್ಲಿಸುವುದು, ಟ್ರಕ್ಕಿಂಗ್ ಸ್ಥಳಗಳಿಗೆ ಭೇಟಿ ನೀಡುವುದನ್ನು ನಿರ್ಬಧಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.