ಚಾರ್ ಧಾಮ್ ಮತ್ತು ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ಸರ್ಕಾರ ಇವರುಗಳಿಗೆ ಸಹಾಯಧನ ನೀಡಲಿದ್ದು, 2021-22 ಹಾಗೂ 2022-23ನೇ ಸಾಲಿಗೆ ಇದನ್ನು ಪಡೆಯಲು ಮುಜರಾಯಿ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
45 ವರ್ಷ ಮೇಲ್ಪಟ್ಟ ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಚಾರ್ ಧಾಮ್ ಗೆ ಹೋಗಿ ಬಂದ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂಪಾಯಿ ಸಹಾಯಧನ ಹಾಗೂ ಮಾನಸ ಸರೋವರ ಯಾತ್ರೆಗೆ ಹೋಗಿ ಬಂದವರಿಗೆ ತಲಾ 30 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ.
ಡಿಸೆಂಬರ್ 1 ರಿಂದ ಡಿಸೆಂಬರ್ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿ ಮೇರೆಗೆ ಸಹಾಯಧನ ವಿತರಿಸಲಾಗುತ್ತದೆ. ಯಾತ್ರಾರ್ತಿಗಳು ಆನ್ಲೈನ್ ಅಥವಾ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು http://karnemaka.kar.nic.in/yatrabenefit ತಾಣಕ್ಕೆ ಭೇಟಿ ನೀಡಬಹುದಾಗಿದೆ. ದಾಖಲೆಗಳ ಕುರಿತ ಹೆಚ್ಚಿನ ಮಾಹಿತಿಯನ್ನು ಇದೇ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.