ತುಮಕೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಕುಣಿಗಲ್ ತಾಲೂಕಿನ ಸಪ್ತಗಿರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ಲಭ್ಯವಿರಲಿಲ್ಲ. ಹಾಗಾಗಿ ಸಿಬ್ಬಂದಿಗಳೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಬಳಿಕ ಚುಂಚನಗಿರಿ ಆಸ್ಪತ್ರೆಗೆ ಮಗುವನ್ನು ಶಿಫ್ಟ್ ಮಾಡುವಂತೆ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಹೇಳಿದ್ದರು.
ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ. ಇದರಿಂದ ಆಕ್ರೋಶಗೊಂಡಿರುವ ಮಗುವಿನ ಪೋಷಕರು, ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು, ಮಗುವಿನ ಸಾವಿಗೆ ಆಸ್ಪತ್ರೆ ಸಿಬ್ಬಂದಿಗಳೇ ಕಾರಣ ಎಂದು ಆರೋಪಿಸಿದ್ದಾರೆ.