ದಸರಾ, ದೀಪಾವಳಿ ಹಬ್ಬಗಳು ಸಮೀಪಿಸುತ್ತಿದೆ. ಈ ಶುಭ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಚಿನ್ನದ ಬೆಲೆಯಲ್ಲಿ ಒಂದೇ ದಿನ 10 ಗ್ರಾಂ ಗೆ 442 ರೂಪಾಯಿಗಳು ಏರಿಕೆಯಾಗಿದ್ದು, 50,399 ರೂಪಾಯಿ ತಲುಪಿದೆ.
ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 558 ರೂ. ಏರಿಕೆಯಾಗುವ ಮೂಲಕ 58,580 ರೂಪಾಯಿ ತಲುಪಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಳವಣಿಗೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿರುವ ಕಾರಣ ಈ ಬೆಲೆ ಏರಿಕೆ ಆಗಿದೆ ಎಂದು ಹೇಳಲಾಗಿದೆ.
ಇದರ ಜೊತೆಗೆ ಬಂಗಾರ ಮತ್ತು ಬೆಳ್ಳಿ ಆಭರಣಗಳ ಹಾಲ್ ಮಾರ್ಕಿಂಗ್ ಶುಲ್ಕವನ್ನೂ ಸಹ ಸರ್ಕಾರ ಏರಿಕೆ ಮಾಡಿದ್ದು, ಇದರಿಂದಾಗಿ ಒಡವೆಗಳು ಮತ್ತಷ್ಟು ದುಬಾರಿಯಾಗಲಿವೆ. ಹಾಲ್ ಮಾರ್ಕ್ ಶುಲ್ಕವನ್ನು 10 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.