alex Certify ಚೀನಾದಲ್ಲಿ ಏರುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ; ಲಾಕ್ ಡೌನ್ ವಿರೋಧಿಸಿ ಬೀದಿಗಿಳಿದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾದಲ್ಲಿ ಏರುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ; ಲಾಕ್ ಡೌನ್ ವಿರೋಧಿಸಿ ಬೀದಿಗಿಳಿದ ಜನ

ಇಡೀ ವಿಶ್ವಕ್ಕೆ ಕೊರೊನಾ ಸೋಂಕನ್ನು ಹರಡಿಸಿದ ಕುಖ್ಯಾತಿಗೆ ಒಳಗಾಗಿರುವ ಚೀನಾದಲ್ಲಿ ಈಗ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಅಲ್ಲದೆ ಕಡ್ಡಾಯ ಪಿಸಿಆರ್ ಪರೀಕ್ಷೆ ಮಾಡಲಾಗುತ್ತಿದ್ದು, ಇದೆಲ್ಲದರಿಂದ ರೋಸತ್ತು ಹೋಗಿರುವ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾನುವಾರ ಒಂದೇ ದಿನ 40,000ಕ್ಕೂ ಅಧಿಕ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ಸೋಂಕು ವ್ಯಾಪಕವಾಗಿರುವ ಪ್ರದೇಶಗಳಲ್ಲಿ ಜನ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದಾರೆ.

ಹೀಗಾಗಿ ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದು, ಇದರಿಂದಾಗಿ ಸೋಂಕು ಮತ್ತಷ್ಟು ಹೆಚ್ಚಳವಾಗುವ ಆತಂಕ ಎದುರಾಗಿದೆ. ಕೆಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚೀನಾದಲ್ಲಿ ಈಗ ಕಾಣಿಸಿಕೊಂಡಿರುವ ಸೋಂಕು ಲಕ್ಷಣರಹಿತ ಪ್ರಕರಣಗಳಾಗಿದ್ದು, ಒಂದೊಮ್ಮೆ ಕೊರೊನಾದ ಹೊಸ ರೂಪಾಂತರ ವರದಿಯಾದಲ್ಲಿ ಚೀನಾ ಜಗತ್ತಿಗೆ ಮತ್ತೊಮ್ಮೆ ಕಂಟಕ ಪ್ರಾಯವಾಗುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...