12,000 ಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಗಳನ್ನು ಭಾರತದಲ್ಲಿ ನಿಷೇಧಿಸಲಾಗುತ್ತದೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದು, ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸೋಮವಾರದಂದು ಈ ಕುರಿತು ಸ್ಪಷ್ಟನೆ ನೀಡಿದ್ದು, 12,000 ಕ್ಕಿಂತ ಕಡಿಮೆ ಬೆಲೆಯ ಚೀನಾ ಕಂಪನಿಗಳ ಸ್ಮಾರ್ಟ್ ಫೋನ್ ಗಳನ್ನು ನಿಷೇಧಿಸುವ ಯಾವುದೇ ಆಲೋಚನೆಯೂ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ.
ಭಾರತದಿಂದ ರಫ್ತು ಹೆಚ್ಚಿಸುವ ಕುರಿತಂತೆ ಚೀನಾದ ಮೊಬೈಲ್ ತಯಾರಿಕಾ ಕಂಪನಿಗಳನ್ನು ಸರ್ಕಾರ ಕೇಳಿದೆ ಎಂದು ತಿಳಿಸಿರುವ ಅವರು, ಮೊಬೈಲ್ ಮಾರುಕಟ್ಟೆಯಲ್ಲಿ ಭಾರತದ ಕಂಪನಿಗಳೂ ಪ್ರಮುಖ ಪಾತ್ರ ವಹಿಸಿವೆ ಎಂದಿದ್ದಾರೆ.