ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರ ತಂದೆ ನಂದಕುಮಾರ್ ಬಘೆಲ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ರಿಗೆ ಪತ್ರ ಬರೆದು ಮತ ಪತ್ರಗಳ ಮೂಲಕ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ನಮ್ಮ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗದೇ ಇದ್ದಲ್ಲಿ ದಯಾಮರಣ ನೀಡಿ ಎಂದು ಕೇಳಿದ್ದಾರೆ.
ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ನಂದಕುಮಾರ್ ಬಘೇಲ್, ಇವಿಎಂ ಮತಯಂತ್ರಗಳ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಹೀಗಾಗಿ ಮತ ಪತ್ರಗಳ ಮೂಲಕವೇ ಚುನಾವಣೆಯನ್ನು ನಡೆಸಿ ಎಂದು ಒತ್ತಾಯಿಸಿದ್ದಾರೆ.
ದೇಶದ ನಾಗರಿಕರ ಸಾಂವಿಧಾನಿಕ ಹಕ್ಕುಗಳು ದೊಡ್ಡ ಮಟ್ಟದಲ್ಲಿ ಉಲ್ಲಂಘನೆಯಾಗುತ್ತಿದೆ. ಪ್ರಜಾಪ್ರಭುತ್ವದ ಮೂರು ಆಧಾರ ಸ್ತಂಭಗಳಾದ ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗ ನಾಶವಾಗುತ್ತಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ಮೂರು ಸ್ಥಂಭಗಳಂತೆ ಕೆಲಸ ಮಾಡುತ್ತಿದೆ. ದೇಶದ ನಾಗರಿಕರ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ನಾಗರಿಕರಲ್ಲಿ ಭಯದ ವಾತಾವರಣ ಮೂಡಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಛತ್ತೀಸ್‌ಗಢ ಸಿಎಂ ತಂದೆ ರಾಷ್ಟ್ರೀಯ ಜಾಗೃತಿ ಮಂಚ್‌ನ ಮುಖ್ಯಸ್ಥರಾಗಿದ್ದಾರೆ, ಇದು ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತದೆ.