ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿರ್ಧಾರ ಬದಲಿಸಿದ್ದು, ಈಗ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಆರ್. ಅಶೋಕ್, ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದರು. ಈಗ ಬಾದಾಮಿ ಕ್ಷೇತ್ರದಿಂದ ಓಡಿ ಬಂದು ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿದ್ದರು ಎಂದು ವ್ಯಂಗ್ಯವಾಡಿದರು.
ಕೋಲಾರದಲ್ಲಿ ಸ್ಪರ್ಧಿಸಿದರೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಸೋಲಿಸಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ಬೇರೆ ರಾಜ್ಯ ಅಥವಾ ದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಸೂಕ್ತ ಎಂದು ಟಾಂಗ್ ನೀಡಿದ್ದಾರೆ.