alex Certify ಚುನಾವಣೆ ಘೋಷಣೆಯಾಗುತ್ತಿದ್ದಂತೆ ನಾಯಕರಿಗೆ ತಟ್ಟಿದ ಬಿಸಿ; ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು ಏರಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಘೋಷಣೆಯಾಗುತ್ತಿದ್ದಂತೆ ನಾಯಕರಿಗೆ ತಟ್ಟಿದ ಬಿಸಿ; ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು ಏರಿದ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರ ಬೀಳಲಿದ್ದು, ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.

ನೀತಿ ಸಂಹಿತೆ ಜಾರಿಯಾದ ಪರಿಣಾಮ ಇದರ ಬಿಸಿ ಅಧಿಕಾರ ಹೊಂದಿರುವ ರಾಜಕೀಯ ನಾಯಕರಿಗೆ ತಟ್ಟಿದ್ದು, ತಮ್ಮ ಸರ್ಕಾರಿ ವಾಹನಗಳನ್ನು ಬಿಟ್ಟು ಖಾಸಗಿ ವಾಹನಗಳತ್ತ ಮುಖ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಇದರ ಬಿಸಿ ಇಂದು ತಟ್ಟಿದೆ.

ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದ ಸಿದ್ದರಾಮಯ್ಯನವರು ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ತಮ್ಮ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...