ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಈ ಬಾರಿ ಅರಮನೆ ಆವರಣದಲ್ಲೇ ಸಿದ್ಧತೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಕೋವಿಡ್ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಸೂಚನೆ ಹೊರಡಿಸಿದೆ.
ʼಆಧಾರ್ʼ ಅಪ್ಡೇಟ್‌ಗೆ ಸೆಲ್ಫ್ ಸರ್ವೀಸ್: ಪರಿಷ್ಕರಣೆ ಶುಲ್ಕದ ಕುರಿತು ಇಲ್ಲಿದೆ ಡೀಟೇಲ್ಸ್
ಅಕ್ಟೋಬರ್ 15ರಂದು ಜಂಬೂಸವಾರಿ ನಡೆಯಲಿದ್ದು, ಜಂಬೂಸವಾರಿಯಲ್ಲಿ ಭಾಗವಹಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ನೆಗೆಟಿವ್ ಇದ್ದರೆ ಮಾತ್ರ ಅರಮನೆ ಆವರಣೆಕ್ಕೆ ಪ್ರವೇಶ ನೀಡಲಾಗುವುದು ಎಂದು ತಿಳಿಸಿದೆ.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅಮೆಜಾನ್ ಇಂಡಿಯಾದಿಂದ ‘ಬಂಪರ್’ ಕೊಡುಗೆ
ಜಂಬೂಸವಾರಿಯಲ್ಲಿ ಭಾಗವಹಿಸುವ ಕಲಾವಿದರು, ಅಧಿಕಾರಿಗಳು, ಸಿಬ್ಬಂದಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ.
ಈ ನಡುವೆ ದಸರಾ ಹಿನ್ನೆಲೆಯಲ್ಲಿ ನಗರದಲ್ಲಿನ ವಿಶೇಷ ದೀಪಾಲಂಕಾರ 10 ದಿನಗಳ ಕಾಲ ವಿಸ್ತರಿಸಲು ಮನವಿ ಮಾಡಲಾಗಿದೆ. ಅಕ್ಟೋಬರ್ 15ರವರೆಗೆ ಇರುವ ದೀಪಾಲಂಕಾರ ಅಕ್ಟೋಬರ್ 25ರವರೆಗೆ ವಿಸ್ತರಿಸುವಂತೆ ವಿನಂತಿಸಲಾಗಿದ್ದು, ಇದರಿಂದ ಪ್ರವಾಸೋದ್ಯಮಕ್ಕೆ ಚೇತರಿಕೆ ಸಿಗಲಿದೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಮನವಿ ಮಾಡಿದೆ.