
ನವರಸ ನಾಯಕ ಜಗ್ಗೇಶ್ ಮಾರ್ಚ್ 17ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಲಾಗಿದೆ.
ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಏಪ್ರಿಲ್ 28ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ.
ಈ ಚಿತ್ರದಲ್ಲಿ ಜಗ್ಗೇಶ್ ಗೆ ಶ್ವೇತಾ ಶ್ರೀವಾತ್ಸವ್ ನಾಯಕಿಯಾಗಿದ್ದು, ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನೋಡಿ ವಿಜಯ್ ಕಿರಂಗದೂರು ಸಿನಿಮಾ ನಿರ್ಮಾಣ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
