alex Certify ಜನವರಿ 2ರಂದು ಹೊರಬೀಳಲಿದೆ ನೋಟು ರದ್ದತಿ ಕುರಿತ ‘ಸುಪ್ರೀಂ’ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 2ರಂದು ಹೊರಬೀಳಲಿದೆ ನೋಟು ರದ್ದತಿ ಕುರಿತ ‘ಸುಪ್ರೀಂ’ ತೀರ್ಪು

500 ಹಾಗೂ 1000 ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಪೂರ್ಣಗೊಂಡಿದೆ.

ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಜನವರಿ 2ರಂದು ಈ ಕುರಿತ ತೀರ್ಪು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

ನ್ಯಾಯಮೂರ್ತಿ ಎಸ್.ಎ. ನಜೀರ್ ಅವರು ಜನವರಿ ನಾಲ್ಕರಂದು ನಿವೃತ್ತರಾಗಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ 2ರಂದು ತೀರ್ಪು ಹೊರಬೀಳುವ ನಿರೀಕ್ಷೆ ಇದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣಿಯನ್ ಮತ್ತು ಬಿ.ವಿ. ನಾಗರತ್ನ ಪೀಠದ ಇತರ ಸದಸ್ಯರಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...