ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಇದರ ಪರಿಣಾಮವಾಗಿ ದೈನಂದಿನ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ರಷ್ಯಾ – ಉಕ್ರೇನ್ ಯುದ್ಧದ ಪರಿಣಾಮ ವಿಶ್ವದ ಎಲ್ಲ ರಾಷ್ಟ್ರಗಳಿಗೂ ತಟ್ಟಿದ್ದು, ಭಾರತದ ಮೇಲೂ ಇದು ಪರಿಣಾಮ ಬೀರಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಹೈರಾಣಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ತಾಳೆಎಣ್ಣೆ ರಫ್ತು ನಿಷೇಧಿಸಲು ಇಂಡೋನೇಷ್ಯಾ ತೀರ್ಮಾನಿಸಿರುವ ಕಾರಣ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ತೀವ್ರವಾಗಿ ಏರಿಕೆಯಾಗಬಹುದು ಎಂದು ಹೇಳಲಾಗಿದೆ.
ಮುಂಬೈ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸಿದ ಕನ್ನಡಿಗ ರಾಹುಲ್
ಈಗಾಗಲೇ ಅಡುಗೆ ಎಣ್ಣೆ ಬೆಲೆ ಮುಗಿಲು ಮುಟ್ಟಿದ್ದು, ಈಗ ಮತ್ತಷ್ಟು ಏರಿಕೆಯಾಗಬಹುದು ಎಂಬ ವಿಷಯ ಆತಂಕಕ್ಕೆ ಕಾರಣವಾಗಿದೆ. ಅಡುಗೆ ಎಣ್ಣೆ ಬೆಲೆ ಏರಿಕೆ ಪರಿಣಾಮ ಹೋಟೆಲ್ ಗಳ ಆಹಾರ ಪದಾರ್ಥಗಳ ಬೆಲೆ ಮೇಲೂ ಬೀರಲಿದೆ.