alex Certify ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತಷ್ಟು ಹೆಚ್ಚಳವಾಗಲಿದೆ ಅಡುಗೆ ಎಣ್ಣೆ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತಷ್ಟು ಹೆಚ್ಚಳವಾಗಲಿದೆ ಅಡುಗೆ ಎಣ್ಣೆ ಬೆಲೆ

ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಇದರ ಪರಿಣಾಮವಾಗಿ ದೈನಂದಿನ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ರಷ್ಯಾ – ಉಕ್ರೇನ್ ಯುದ್ಧದ ಪರಿಣಾಮ ವಿಶ್ವದ ಎಲ್ಲ ರಾಷ್ಟ್ರಗಳಿಗೂ ತಟ್ಟಿದ್ದು, ಭಾರತದ ಮೇಲೂ ಇದು ಪರಿಣಾಮ ಬೀರಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಹೈರಾಣಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ತಾಳೆಎಣ್ಣೆ ರಫ್ತು ನಿಷೇಧಿಸಲು ಇಂಡೋನೇಷ್ಯಾ ತೀರ್ಮಾನಿಸಿರುವ ಕಾರಣ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ತೀವ್ರವಾಗಿ ಏರಿಕೆಯಾಗಬಹುದು ಎಂದು ಹೇಳಲಾಗಿದೆ.

ಮುಂಬೈ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸಿದ ಕನ್ನಡಿಗ ರಾಹುಲ್

ಈಗಾಗಲೇ ಅಡುಗೆ ಎಣ್ಣೆ ಬೆಲೆ ಮುಗಿಲು ಮುಟ್ಟಿದ್ದು, ಈಗ ಮತ್ತಷ್ಟು ಏರಿಕೆಯಾಗಬಹುದು ಎಂಬ ವಿಷಯ ಆತಂಕಕ್ಕೆ ಕಾರಣವಾಗಿದೆ. ಅಡುಗೆ ಎಣ್ಣೆ ಬೆಲೆ ಏರಿಕೆ ಪರಿಣಾಮ ಹೋಟೆಲ್ ಗಳ ಆಹಾರ ಪದಾರ್ಥಗಳ ಬೆಲೆ ಮೇಲೂ ಬೀರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...