alex Certify ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಭಾನುವಾರದಂದು ಬೆಳಗಾವಿಯಲ್ಲಿ ಮಾತನಾಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಈ ವಿಷಯ ತಿಳಿಸಿದ್ದು, ಪ್ರತಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

ದರ ಪರಿಷ್ಕರಣೆಯ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ ಎಂದು ಹೇಳಿದ ಅವರು, ಹೈನುಗಾರರ ಹಿತದೃಷ್ಟಿಯಿಂದ ಹಾಲಿನ ಬೆಲೆ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...