ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರ ವಲಯದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತಿದೆ.
ಮೂರು ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದ್ದು, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಶಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಜನಸ್ಪಂದನ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಚಿವ ಎಂಟಿಬಿ ನಾಗರಾಜ್ ಮತ್ತಿತರರು ಹೆಜ್ಜೆ ಹಾಕಿದ್ದಾರೆ.