alex Certify ಜನಾಭಿಪ್ರಾಯ ಪಡೆಯಲು ಧರ್ಮಾಧರಿತ ರಾಜಕಾರಣ ಸರಿಯಲ್ಲ – ಹೆಚ್.ಸಿ. ಮಹದೇವಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಾಭಿಪ್ರಾಯ ಪಡೆಯಲು ಧರ್ಮಾಧರಿತ ರಾಜಕಾರಣ ಸರಿಯಲ್ಲ – ಹೆಚ್.ಸಿ. ಮಹದೇವಪ್ಪ

ಶೂದ್ರ ಸಮಾಜ ಸಂಘಟನಾತ್ಮಕವಾಗಿ ಹೋರಾಟವನ್ನು ನಡೆಸಬೇಕು. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ಮುಂದಿಟ್ಟುಕೊಂಡು ಕೋಮುವಾದ ಮತ್ತು ಜಾತಿವಾದವನ್ನು ಹಿಮ್ಮೆಟ್ಟಿಸಿ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಬೇಕು ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ಜಾಗೃತ ವೇದಿಕೆ ವತಿಯಿಂದ ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ನಡೆದ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಾಭಿಪ್ರಾಯವನ್ನು ಪಡೆಯಲು ನಮ್ಮ ದೇಶದ ಬಹುತ್ವ ಮತ್ತು ಸೌಹಾರ್ದತೆಯನ್ನು ನಾಶ ಮಾಡಲು ಧರ್ಮಧಾರಿತ ರಾಜಕಾರಣವನ್ನು ಬಿಜೆಪಿ ಮತ್ತು ಅದರ ಪಳೆಯುಳಿಕೆಗಳು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದ್ರು.

ಅಂಬೇಡ್ಕರ್ ಜಯಂತಿ ರಾಜಕೀಯ ಹುಟ್ಟುಹಬ್ಬದ ಆಚರಣೆಯಲ್ಲ. ಭಾರತದಲ್ಲಿ ಪ್ರತಿ ಹೋರಾಟಗಳನ್ನು ನಿರೂಪಿಸುವಂತಹ ಅತ್ಯಂತ ಮಹತ್ವದ ದಿನ. 21ನೇ ಶತಮಾನ ಸವಾಲಿನಿಂದ ಕೂಡಿದೆ. ಈ ಸವಾಲು, ಭಾಷೆ, ಧರ್ಮ, ಜಾತಿಗೆ ಸೀಮಿತವಾಗಿಲ್ಲ. ಇಡೀ ಸಂವಿಧಾನಕ್ಕೆ ಸವಾಲು ಎಸೆಯುವಂತಹ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ರು.

ಸಂವಿಧಾನದ ಸುಖೀ ರಾಜ್ಯ ಮತ್ತು ಮೌಲ್ಯ, ಧರ್ಮ, ಜಾತಿ, ಪ್ರದೇಶಗಳಲ್ಲಿ ತಾರತಮ್ಯ ಮಾಡದೇ ಎಲ್ಲರಿಗೂ ಸಮಾನತೆ ಮತ್ತು ಸಮನಾವಕಾಶಗಳನ್ನು ಒದಗಿಸಿಕೊಟ್ಟು ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ಸಂವಿಧಾನ ಉಳಿದ್ರೆ ನಾವು ಉಳಿಯುತ್ತೇವೆ. ನಾವು ಉಳಿಯಬೇಕಾದ್ರೆ ಸಂವಿಧಾನ ಉಳಿಯಬೇಕು. ಹೀಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಿ ಸಂವಿಧಾನದ ರಕ್ಷಣೆಯನ್ನು ಮಾಡಬೇಕು ಎಂದು ಹೇಳಿದ್ರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...