
ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಇಶಾನ್ ಕಿಶನ್ 42 ಎಸೆತಗಳಲ್ಲಿ (59) ರನ್ ಗಳಿಸಿದರು ಇವರ ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಗಳಿದ್ದವು.
ಇಂದು ದಕ್ಷಿಣ ಆಫ್ರಿಕಾ ಹಾಗೂ ಐರ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ
ಇಶಾನ್ ಕಿಶನ್ ತಮ್ಮ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಸಿಡಿಸಿದ್ದಾರೆ ಮತ್ತೊಂದು ವಿಶೇಷವೆಂದರೆ ನಿನ್ನೆ ಇಶಾನ್ ಕಿಶನ್ ಅವರ 23ನೇ ಜನ್ಮದಿನ. ನಿನ್ನೆಯ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕಾರ್ಯನಿರ್ವಹಿಸಿದ ಇಶಾನ್ ಕಿಶನ್ 1 ಕ್ಯಾಚ್ ಕೂಡ ಹಿಡಿದಿದ್ದಾರೆ. ಯುವ ಕ್ರಿಕೆಟಿಗ ಇಶಾನ್ ಕಿಶನ್ ಮುಂದಿನ ದಿನಗಳಲ್ಲಿ ಭಾರತ ಕ್ರಿಕೆಟ್ ತಂಡದ ಭರವಸೆಯ ಆಟಗಾರನಾಗುವ ಸಾಧ್ಯತೆ ಇದೆ.