alex Certify ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನ ಸ್ಥಾನದಲ್ಲಿವೆ : ದೆಹಲಿ ಹೈಕೋರ್ಟ್‌ಗೆ ಕೇಂದ್ರದಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನ ಸ್ಥಾನದಲ್ಲಿವೆ : ದೆಹಲಿ ಹೈಕೋರ್ಟ್‌ಗೆ ಕೇಂದ್ರದಿಂದ ಮಹತ್ವದ ಮಾಹಿತಿ

‘ಜನ ಗಣ ಮನ’ ಹಾಗೂ ‘ವಂದೇ ಮಾತರಂ’ಗೆ ಸಮಾನ ಸ್ಥಾನಮಾನ ನೀಡಬೇಕು ಎಂಬ ಮನವಿಗೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ಇವೆರಡೂ ಒಂದೇ ಮಟ್ಟದಲ್ಲಿದ್ದು ದೇಶದ ಪ್ರತಿಯೊಬ್ಬ ಪ್ರಜೆಯೂ ಸಮಾನ ಗೌರವ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

“ಭಾರತೀಯರ ಭಾವನೆಗಳು ಮತ್ತು ಮನಸ್ಸಿನಲ್ಲಿ ರಾಷ್ಟ್ರಗೀತೆ ವಿಶಿಷ್ಟ ಮತ್ತು ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ” ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ. ಈ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಜನವರಿ 24, 1950 ರಂದು ಭಾರತದ ಸಂವಿಧಾನ ಸಭೆಯ ಅಧ್ಯಕ್ಷರು ‘ಜನ ಗಣ ಮನ’ವನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡರು.

ರಾಷ್ಟ್ರಗೀತೆಯನ್ನು ನುಡಿಸುವ ಅಥವಾ ಹಾಡಬೇಕಾದ ವಿಧಾನ ಮತ್ತು ಸಂದರ್ಭಗಳ ಬಗ್ಗೆ ‘ಭಾರತದ ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶಗಳನ್ನು’ ಹೊರಡಿಸಲಾಗಿದೆ. 1971 ರಲ್ಲಿ, ರಾಷ್ಟ್ರಗೀತೆಯನ್ನು ಹಾಡುವುದನ್ನು ತಡೆಯುವ ಅಥವಾ ಅಂತಹ ಗಾಯನದಲ್ಲಿ ತೊಡಗಿರುವ ಯಾವುದೇ ಸಭೆಗೆ ಅಡ್ಡಿಪಡಿಸುವುದು ರಾಷ್ಟ್ರದ ಗೌರವಕ್ಕೆ ಅಪಮಾನ ಮಾಡಿದಂತೆ ಎಂದು ಪರಿಗಣಿಸಲಾಯ್ತು. ಇದನ್ನು ತಡೆಗಟ್ಟಲು 1971ರ ಕಾಯಿದೆ ಮೂಲಕ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗಿದೆ.

ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯ ನಡುವಿನ ಸಮಾನತೆ ಹಾಗೂ  ‘ವಂದೇ ಮಾತರಂ’ಗೆ ಅದೇ ಗೌರವವನ್ನು ನೀಡುವ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಬಿಜೆಪಿ ನಾಯಕ-ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಕೇಂದ್ರ ಪ್ರತಿಕ್ರಿಯಿಸಿದೆ. ಎರಡಕ್ಕೂ ಸಮಾನವಾದ ಸ್ಥಾನಮಾನವಿದೆ ಎಂದು ಹೇಳಿದೆ. ಆದರೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ವಿಷಯದಲ್ಲಿ ಸರ್ಕಾರವು ಇದೇ ರೀತಿಯ ದಂಡದ ನಿಬಂಧನೆಗಳನ್ನು ಮಾಡಿಲ್ಲ. ಅದನ್ನು ಯಾವ ಸಂದರ್ಭಗಳಲ್ಲಿ ಹಾಡಬಹುದು ಅಥವಾ ನುಡಿಸಬಹುದು ಎಂಬ ಸೂಚನೆಗಳನ್ನು ನೀಡಿಲ್ಲ.

ಉಪಾಧ್ಯಾಯ ಅವರ ಹಿಂದಿನ ಮನವಿಯಲ್ಲಿ ಕೇಂದ್ರವು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದೆ. ಜನವರಿ 17, 2017 ರಂದು ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಭಾರತದ ಸಂವಿಧಾನದ 51 ಎ (ಎ) ವಿಧಿಯು ‘ರಾಷ್ಟ್ರೀಯ ಗೀತೆ’ ಯನ್ನು ಉಲ್ಲೇಖಿಸುವುದಿಲ್ಲ ಎಂದು ಹೇಳಿತ್ತು. ಇದು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಮಾತ್ರ ಉಲ್ಲೇಖಿಸುತ್ತದೆ. ಸಂವಿಧಾನಕ್ಕೆ ಬದ್ಧವಾಗಿರುವುದು ಮತ್ತು ಅದರ ಆದರ್ಶಗಳನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಕೂಡ ಆದ್ಯ ಕರ್ತವ್ಯವಾಗಿದೆ. ಆದರೆ ರಾಷ್ಟ್ರೀಯ ಗೀತೆಗೆ ಸಂಬಂಧಿಸಿದಂತೆ ಯಾವುದೇ ಚರ್ಚೆಗೆ ಪ್ರವೇಶಿಸಲು ಉದ್ದೇಶಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...