alex Certify ‘ಜವಾಹರ ನವೋದಯ ವಿದ್ಯಾಲಯ’ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜವಾಹರ ನವೋದಯ ವಿದ್ಯಾಲಯ’ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಜವಾಹರ ನವೋದಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2024 – 25 ನೇ ಶೈಕ್ಷಣಿಕ ವರ್ಷದ 6 ನೇ ತರಗತಿಗೆ ಆಯ್ಕೆ ಪರೀಕ್ಷೆಯ ಮೂಲಕ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳೇ ಆಗಿರಬೇಕಿದ್ದು, 2023 – 24ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ / ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿರಬೇಕು. ಅಲ್ಲದೆ ಮೂರು ಮತ್ತು ನಾಲ್ಕನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡೆ ಹೊಂದಿರಬೇಕು.

1-5-2012 ರಿಂದ 31-7-2014 ರ ನಡುವೆ ಜನಿಸಿದವರು ಪ್ರವೇಶಕ್ಕೆ ಅರ್ಹರಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನಾಂಕವಾಗಿದೆ. ಆಯ್ಕೆ ಪರೀಕ್ಷೆ ಚಳಿಗಾಲವಿರುವ ಪ್ರದೇಶಗಳಲ್ಲಿ 2023ರ ನವೆಂಬರ್ 4ರಂದು ನಡೆಯಲಿದ್ದು, ಬೇಸಿಗೆ ಕಾಲವಿರುವ ಪ್ರದೇಶಗಳಲ್ಲಿ 2024ರ ಜನವರಿ 20ರಂದು ನಡೆಯಲಿದೆ.

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇಕಡ 75 ರಷ್ಟು ಸ್ಥಾನಗಳು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದ್ದು, ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ ಮತ್ತು ವಸತಿ ಕಲ್ಪಿಸಲಾಗುತ್ತದೆ. ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯದ ವ್ಯವಸ್ಥೆ ಇದ್ದು, ಜವಾಹರ ನವೋದಯ ವಿದ್ಯಾಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ www.navodaya.gov.in ಸಂಪರ್ಕಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...