ಆಳುವ ಸರ್ಕಾರಗಳಿಗೆ ‘ಜಸ್ಟ್ ಆಸ್ಕಿಂಗ್’ ಮೂಲಕ ನಾನು ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇನೆ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನು ಧ್ವನಿ ಎತ್ತದಿದ್ದರೆ ಸತ್ತೇ ಹೋಗುತ್ತೇನೆ ಎಂದು ನಟ ಪ್ರಕಾಶ್ ರಾಜ್ ಮಾರ್ಮಿಕವಾಗಿ ನುಡಿದಿದ್ದಾರೆ.
ಭಾನುವಾರದಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಪ್ರಶ್ನಿಸಬೇಕಾಗಿದ್ದು ಎಲ್ಲರ ಹೊಣೆಯಾಗಿರುತ್ತದೆ. ಅದು ಹಕ್ಕು ಕೂಡ ಹೌದು. ಒಂದು ವೇಳೆ ತಪ್ಪಾಗಿದ್ದಲ್ಲಿ ಅದನ್ನು ಸರಿಪಡಿಸುವ ಜವಾಬ್ದಾರಿ ಸರ್ಕಾರದ್ದು ಎಂದು ತಿಳಿಸಿದರು.
ಇನ್ನು ಹಿಂದಿ ಕುರಿತು ಮಾತನಾಡಿದ ನಟ ಪ್ರಕಾಶ್ ರಾಜ್, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ರಾಷ್ಟ್ರಭಾಷೆ ಎನ್ನುವುದಾದರೆ ಇದಕ್ಕೆ ಯಾವುದಾದರೂ ಆಧಾರ ಇದೆಯೇ ಎಂದು ಪ್ರಶ್ನಿಸಿದರು.