alex Certify ಜಹಾಂಗೀರ್ ಪುರಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ: 2 ವಾರ ಸ್ಥಗಿತಕ್ಕೆ ಸುಪ್ರೀಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಹಾಂಗೀರ್ ಪುರಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ: 2 ವಾರ ಸ್ಥಗಿತಕ್ಕೆ ಸುಪ್ರೀಂ ಆದೇಶ

ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ನಡೆದಿತ್ತು. ಗಲಭೆಕೋರರಿಗೆ ಸೇರಿದ ಕಟ್ಟಡಗಳನ್ನು ಉತ್ತರ ದೆಹಲಿ ಮಹಾನಗರ ಪಾಲಿಕೆ ಬುಲ್ಡೋಜರ್ ಬಳಸಿ ನೆಲಸಮ ಮಾಡಲು ಮುಂದಾಗಿತ್ತು.

ಜಹಾಂಗೀರ್ ಪುರಿ ತೆರವು ಕಾರ್ಯಾಚರಣೆ ವಿರೋಧಿಸಿ ಜಮಾಯತ್-ಉಲಮಾ -ಐ ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಉತ್ತರ ದೆಹಲಿ ಮಹಾನಗರ ಪಾಲಿಕೆ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಆದೇಶದ ಬಳಿಕವೂ ಕಾರ್ಯಾಚರಣೆ ನಡೆಸಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಕೋರ್ಟ್ ತಿಳಿಸಿದೆ.

ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿ ಎರಡು ವಾರಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್ ಆದೇಶಿಸಿದೆ. ಮುಂದಿನ ಆದೇಶದವರೆಗೂ ತೆರವು ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...