alex Certify ಜಾಗತಿಕ ಹಸಿವು ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಗತಿಕ ಹಸಿವು ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ….!

ಭಾರತದಲ್ಲಿ ಹಸಿವಿನಿಂದ ಅಪೌಷ್ಟಿಕತೆ ಉಂಟಾಗುತ್ತಿದೆ ಎನ್ನಲಾಗಿದೆ. ಇತ್ತೀಚೆಗೆ ಜಾಗತಿಕ ಹಸಿವು ಸೂಚ್ಯಂಕ ನೀಡಿದ ವರದಿ ಪ್ರಕಾರ, ಭಾರತ 107 ನೇ ಸ್ಥಾನಕ್ಕೆ ಕುಸಿದಿದೆಯಂತೆ. ಇಂಥಹದೊಂದು ಆತಂಕ ಪಡುವ ವಿಚಾರ ಇದೀಗ ಬಹಿರಂಗವಾಗಿದೆ.

ಜಾಗತಿಕ ಹಸಿವು ಸೂಚ್ಯಂಕದ 2022ರ ಪಟ್ಟಿಯಲ್ಲಿ ಭಾರತ 107ನೇ ಸ್ಥಾನ ಪಡೆದಿದೆ. ಕಳೆದ ವರ್ಷ 101ನೇ ಸ್ಥಾನದಲ್ಲಿ ಭಾರತ ಇತ್ತು. ಇನ್ನು ಐರಿಶ್ ಸಂಸ್ಥೆ ಕನ್ಸರ್ನ್ ವರ್ಲ್ಡ್‌ವೈಡ್ ಮತ್ತು ಜರ್ಮನ್ ಸಂಸ್ಥೆ ವೆಲ್ಟ್ ಹಂಗರ್ ಹಿಲ್ಫ್ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಭಾರತದಲ್ಲಿ ಹಸಿವು ಹೇಗಿದೆ, ಅದು ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಭಾರತದ ನೆರೆಯ ದೇಶಗಳಾದ ನೇಪಾಳಕ್ಕೆ 81, ಪಾಕಿಸ್ತಾನಕ್ಕೆ 99, ಶ್ರೀಲಂಕಾಕ್ಕ 64, ಮತ್ತು ಬಾಂಗ್ಲಾದೇಶಕ್ಕೆ 84 ನೇ ಸ್ಥಾನ ನೀಡಲಾಗಿದೆ. ಇನ್ನು ಅಪೌಷ್ಟಿಕತೆ, ಇದು ಮಗುವಿನ ಕ್ಷೀಣತೆ ಜೊತೆಗೆ ಮಕ್ಕಳ ಬೆಳವಣಿಗೆ ಕುಂಠಿತ, ಮತ್ತು ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದ ಮೇಲೆ ಸ್ಥಾನಗಳನ್ನು ನಿರ್ಧರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...