alex Certify ಜಿಲ್ಲಾ ಪಂಚಾಯತ್ ಚುನಾವಣೆಯೇ ಆಗಿಲ್ಲ, ಇನ್ನು ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ಮಾಡ್ತಾರಾ….? ಸಿದ್ದರಾಮಯ್ಯ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲಾ ಪಂಚಾಯತ್ ಚುನಾವಣೆಯೇ ಆಗಿಲ್ಲ, ಇನ್ನು ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ಮಾಡ್ತಾರಾ….? ಸಿದ್ದರಾಮಯ್ಯ ಪ್ರಶ್ನೆ

ಕಲಬುರ್ಗಿ: ಅವಧಿಗೂ ಮುನ್ನ ಚುನಾವಣೆ ನಡೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಕಲಬುರ್ಗಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಅವಧಿಗೂ ಮುನ್ನ ಚುನಾವಣೆಗೆ ಹೋಗುವುದಿಲ್ಲ. ಒಂದು ವೇಳೆ ಚುನಾವಣೆ ನಡೆದರೆ ಕಾಂಗ್ರೆಸ್ ಸಿದ್ಧವಿದೆ. ಜಿಲ್ಲಾ ಪಂಚಾಯತ್ ಚುನಾವಣೆಯೇ ಇನ್ನೂ ನಡೆದಿಲ್ಲ. ಇನ್ನು ವಿಧಾನಸಭಾ ಚುನಾವಣೆ ಮಾಡ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್ ಗಂಗಾ ಯಶಸ್ವಿಯಾಗಿದೆ; ಸಚಿವ ಆರ್.ಅಶೋಕ್

ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪರನ್ನೇ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಸಿಎಂ ಸ್ಥಾನ ಬಿಡುವಾಗ ಕಣ್ಣೀರು ಹಾಕಿದರು. ಹೆದರಿಸಿ ಬೆದರಿಸಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಕೇವಲ 2 ವರ್ಷ ಮಾತ್ರ ಬಿ ಎಸ್ ವೈ ಸಿಎಂ ಆಗಿದ್ದರು. ಇವರ ಹೇಳಿಕೆಗಳು ರಾಜ್ಯದಲ್ಲಿ ನಡೆಯಲ್ಲ. ಜನರು ಬದಲಾವಣೆ ಬಯಸಿದ್ದಾರೆ. ಬಿಜೆಪಿ ಭ್ರಷ್ಟ ಸರ್ಕಾರಕ್ಕೆ ಜನ ಬೇಸತ್ತಿದ್ದಾರೆ ಎಂದು ಹೇಳಿದರು.

ಇನ್ನು ಪಕ್ಷ ಬಿಟ್ಟು ಬಿಜೆಪಿಗೆ ಹೋದ ನಾಯಕರನ್ನು ಮತ್ತೆ ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಲ್ಲ. ಜನ ಸಾಧನೆಯ ಆಧಾರದ ಮೇಲೆ ಮತ ಹಾಕುತ್ತಿಲ್ಲ. ಹಿಂದುತ್ವದ ಆಧಾರದ ಮೇಲೆ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...