ತುಪ್ಪ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಕೆಲವರು ತುಪ್ಪವನ್ನು ಸೇವಿಸಿದರೆ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಆದರೆ ಇದು ಸುಳ್ಳು, ತುಪ್ಪದ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳನ್ನು ನಂಬಬೇಡಿ.
*ತುಪ್ಪ ಸೇವನೆಯಿಂದ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಆದರೆ ತುಪ್ಪ ತೂಕವನ್ನು ಹೆಚ್ಚಿಸುವುದಿಲ್ಲ. ದೇಹವನ್ನು ಫಿಟ್ ಆಗಿ ಇರಿಸುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.
*ತುಪ್ಪವನ್ನು ಸೇವಿಸುವುದರಿಂದ ಹೃದಯಾಘಾತವಾಗುತ್ತದೆ ಮತ್ತು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಆದರೆ ದೇಸಿ ತುಪ್ಪ ವಿಟಮಿನ್ ಎ, ಇ, ಡಿಯಂತಹ ಅಂಶಗಳನ್ನು ಹೊಂದಿರುತ್ತದೆ. ಇದು ಕೊಬ್ಬನ್ನು ಕರಗಿಸಿ ಹೃದಯವನ್ನು ಆರೋಗ್ಯವಾಗಿಡುತ್ತದೆ.