
ಕಿರಣ್ ರಾಜ್ ಆಕ್ಷನ್ ಕಟ್ ಹೇಳಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಜೂನ್ 10ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ 5ಭಾಷೆಗಳಲ್ಲಿ ತೆರೆಕಾಣಲಿದೆ.
ಈ ಕುರಿತು ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದೆ. ಕಾಮಿಡಿ ಡ್ರಾಮಾ ಆಧಾರಿತ ಈ ಸಿನಿಮಾದಲ್ಲಿ ಮನುಷ್ಯ ಹಾಗೂ ಶ್ವಾನದ ನಡುವಿನ ಸಂಬಂಧವನ್ನು ತಿಳಿಸಲಿದ್ದಾರೆ.
ಪರಂವಾ ಸ್ಟುಡಿಯೋಸ್ ಬ್ಯಾನರ್ ನಡಿ ಜಿ ಎಸ್ ಗುಪ್ತಾ ಹಾಗೂ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ನೋಬಿನ್ ಪೌಲ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದು, ಅರವಿಂದ್ ಎಸ್ ಕಶ್ಯಪ್ ಅವರ ಛಾಯಾಗ್ರಹಣವಿದೆ. ರಕ್ಷಿತ್ ಶೆಟ್ಟಿ ಸೇರಿದಂತೆ ಸಂಗೀತಾ ಶೃಂಗೇರಿ, ಡ್ಯಾನಿಶ್ ಸೇಠ್, ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
