
ಶ್ರೀಕಾಂತ್ ಕಟಗಿ ನಿರ್ದೇಶನದ ನವೀನ್ ಶಂಕರ್ ಅಭಿನಯದ ಬಹುನಿರೀಕ್ಷಿತ ‘ಕ್ಷೇತ್ರಪತಿ’ ಚಿತ್ರದ ಟೀಸರ್ ಇದೇ ತಿಂಗಳು ಜೂನ್ 15ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸಂಜೆ 4.05ಕ್ಕೆ ಈ ಟೀಸರ್ ರಿಲೀಸ್ ಮಾಡಲಿದ್ದಾರೆ.
ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆ ಮಾಡವುದಾಗಿ ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದೆ, ಈ ಚಿತ್ರದಲ್ಲಿ ಅರ್ಚನಾ ಜೋಯಿಸ್ ನಾಯಕಿಯಾಗಿ ಅಭಿನಯಿಸಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಆಶ್ರಗ ಕ್ರಿಯೇಶನ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ.
