
ಕಿರುತೆರೆ ನಟ ಶ್ರೀ ಮಹದೇವ್ ಹಾಗೂ ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ಅದಿತಿ ಪ್ರಭುದೇವ ಅಭಿನಯಿಸಿರುವ ಬಹುನಿರೀಕ್ಷಿತ ‘ಗಜಾನನ and ಗ್ಯಾಂಗ್’ ಚಿತ್ರ ಜೂನ್ 3ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.
ಇಂದು ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡ ಅನೌನ್ಸ್ ಮಾಡಿದೆ ಕಾಮಿಡಿ ಡ್ರಾಮಾ ಆಧಾರಿತ ಈ ಸಿನಿಮಾ ಸುಮಾರು 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಅಭಿಷೇಕ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿದೆ, ಈ ಚಿತ್ರದಲ್ಲಿ ಮೇಘನಾ ರಾಜ್ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ ಪ್ರದ್ಯೋತನ್ ಸಂಗೀತ ಸಂಯೋಜನೆ ನೀಡಿದ್ದು, ಬೃಂದಾವನ್ ಎಂಟರ್‌ಪ್ರೈಸಸ್ ಬ್ಯಾನರ್ ನಡಿ ನಾಗೇಶ್ ಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ.
