alex Certify ಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ – ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ – ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ

ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳ ಪರ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಷಾ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೊದಲಾದ ನಾಯಕರುಗಳು ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ಪರವಾಗಿ ಮಾಜಿ ಪ್ರಧಾನಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.

ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮೇ ಮೊದಲ ವಾರದಂದು ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.

ಮಮತಾ ಬ್ಯಾನರ್ಜಿಯವರು ಬೆಂಗಳೂರು ಹಾಗೂ ಮೈಸೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದರೆ, ಕೆ. ಚಂದ್ರಶೇಖರ ರಾವ್ ಅವರು ಚಿಕ್ಕಬಳ್ಳಾಪುರ, ಕೋಲಾರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...