
ಜೆಡಿಎಸ್ ಕಥೆ ಮುಗಿದೇ ಹೋಯಿತು ಎಂದು ಹೇಳುತ್ತಿರುವ ಕೆಲ ನಾಯಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ಈ ಚುನಾವಣೆಯ ಸಂದರ್ಭದಲ್ಲಿ ಪಂಚರತ್ನ ಯೋಜನೆಗಳ ಕುರಿತು ಜನರಿಗೆ ತಿಳಿಸುವ ಕಾರ್ಯ ಮಾಡಿದ್ದೇವೆ. ಸ್ಪಷ್ಟ ಬಹುಮತ ನೀಡಿದರೆ ಇವುಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದರು.
ರಾಷ್ಟ್ರೀಯ ಪಕ್ಷಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನು ರಾಜ್ಯದ ಜನತೆ ಮನಗಂಡಿದ್ದಾರೆ. ಹೀಗಾಗಿ ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳವನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, ಈ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕರಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.