alex Certify ಜೈಲು ಶಿಕ್ಷೆಗೆ ಗುರಿಯಾಗಿರುವ ಆಜಂ ಖಾನ್ ಈಗ ಶಾಸಕತ್ವದಿಂದಲೂ ಅನರ್ಹ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಶಿಕ್ಷೆಗೆ ಗುರಿಯಾಗಿರುವ ಆಜಂ ಖಾನ್ ಈಗ ಶಾಸಕತ್ವದಿಂದಲೂ ಅನರ್ಹ….!

ದ್ವೇಷ ಭಾಷಣದ ಕಾರಣಕ್ಕಾಗಿ ನ್ಯಾಯಾಲಯದಿಂದ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಆಜಂ ಖಾನ್ ಅವರಿಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.

ಉತ್ತರ ಪ್ರದೇಶದ ರಾಂಪುರ್ ಸಾದರ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಆಜಾಂ ಖಾನ್ ಅವರನ್ನು ಈಗ ಶಾಸಕತ್ವದಿಂದಲೂ ಅನರ್ಹಗೊಳಿಸಲಾಗಿದ್ದು, ಈ ಕುರಿತಂತೆ ಶುಕ್ರವಾರದಂದು ವಿಧಾನಸಭಾ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ.

2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪುರ್ ನ್ಯಾಯಾಲಯ ಗುರುವಾರದಂದು ತೀರ್ಪು ಪ್ರಕಟಿಸಿದ್ದು, ಮೂರು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ನೀಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...