ಕೋವಿಡ್ ಸಾಂಕ್ರಾಮಿಕ ರೋಗ ಹರಡಿದ ನಂತರ ಪ್ರಪಂಚದಾದ್ಯಂತ ಜನರಿಗೆ ವ್ಯಾಕ್ಸಿನೇಷನ್ ಕೊಡಲಾಗುತ್ತಿದೆ. ಆದರೆ, ಜನರು ಮಾತ್ರ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಸರ್ಕಾರವು ಸೆಲೆಬ್ರಿಟಿಗಳ ಜೊತೆ ಸೇರಿ ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
ಇದೀಗ ಸ್ವತಃ ಅಮೆರಿಕಾ ಅಧ್ಯಕ್ಷರು, ಪಾಪ್ ಗಾಯಕರಾದ ಜೋನಾಸ್ ಸೋದರರ ಜೊತೆ ಸೇರಿದ್ದಾರೆ. ಹೌದು, ಲಸಿಕೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೋನಾಸ್ ಸಹೋದರರು ಬಿಗ್ ಬಾಂಗ್ ಹಾಡಿಗೆ ಲಿಪ್ ಸಿಂಕ್ ಮಾಡಿದ್ದು, ಇದರಲ್ಲಿ ಜೋ ಬಿಡೆನ್ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ವಿಡಿಯೋವನ್ನು ನಿಕ್ ಜೋನಾಸ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ ನಿಕ್, ಅಧ್ಯಕ್ಷ ಬಿಡೆನ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಡಿಸೆಂಬರ್ 18 ರಂದು ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಇದುವರೆಗೆ 3 ಲಕ್ಷಕ್ಕೂ ಹೆಚ್ಚು ಲೈಕ್ಗಳು ಬಂದಿವೆ. ಈ ವಿಡಿಯೋಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದನ್ನು ಇಷ್ಟಪಟ್ಟರೆ, ಇನ್ನೂ ಕೆಲವರು ಬಿಡೆನ್ ಅವರನ್ನು ಟೀಕಿಸಿದ್ದಾರೆ.