ದೇಹಕ್ಕೆ ಆಮ್ಲಜನಕ ಪೂರೈಕೆ ಮತ್ತು ರಕ್ತ ಸಂಚಾರ ಕ್ರಿಯೆ ಚೆನ್ನಾಗಿ ನಡೆಯಬೇಕಾದರೆ ನಿತ್ಯವೂ ಆರೋಗ್ಯಕರ ಆಹಾರ ಸೇವಿಸುವುದು ಬಹಳ ಮುಖ್ಯ. ಮೆದುಳಿನ ಚಟುವಟಿಕೆ ಮತ್ತು ಜ್ಞಾಪಕ ಶಕ್ತಿಯನ್ನು ಹಿಗ್ಗಿಸುವ ಆಹಾರದ ಬಗ್ಗೆ ತಿಳಿಯೋಣ.
ನೆನಪಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಾದಾಮಿ ಪ್ರಮುಖ ಪಾತ್ರ ವಹಿಸುತ್ತದೆ. ಬಾದಾಮಿ ಪುಡಿಯನ್ನು ಹಾಲಿನೊಂದಿಗೆ ಸೇವಿಸಬೇಕು. ಇಲ್ಲವಾದರೆ ರಾತ್ರಿ ಹೊತ್ತು ನೆನೆಸಿಟ್ಟು ಬೆಳಿಗ್ಗೆ ಸಿಪ್ಪೆ ತೆಗೆದು ಸೇವಿಸಬೇಕು. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಒಮೆಗಾ ತ್ರೀ ಫ್ಯಾಟಿ ಆಸಿಡ್ ಮೆದುಳಿನ ಕಾರ್ಯಗಳಿಗೆ ಉತ್ತೇಜನ ನೀಡುತ್ತದೆ. ಗರ್ಭಿಣಿಯರಿಗೆ ಮತ್ತು ಚಿಕ್ಕ ಮಕ್ಕಳ ಬೆಳವಣಿಗೆಗೆ ಇದು ಸಹಾಯಕವಾಗಿದೆ.
ಬೆಟ್ಟದ ನೆಲ್ಲಿಕಾಯಿಯನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಟ್ಟದ ನೆಲ್ಲಿಕಾಯಿ ಜ್ಯೂಸ್ ಮಾಡಿ ಕುಡಿಯಬಹುದು ಅಥವಾ ಹಸಿಯಾಗಿ ತಿನ್ನಬಹುದು.
ಕಪ್ಪುಜೀರಿಗೆ ಮತ್ತು ಜೇನುತುಪ್ಪವನ್ನು ಸೇರಿಸಿ ತಿನ್ನಬೇಕು. ಇದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.