alex Certify ಟಿಕೆಟ್ ಕೈತಪ್ಪುವ ಭೀತಿ; BSY ಭೇಟಿಯಾದ ಅರವಿಂದ ಲಿಂಬಾವಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕೆಟ್ ಕೈತಪ್ಪುವ ಭೀತಿ; BSY ಭೇಟಿಯಾದ ಅರವಿಂದ ಲಿಂಬಾವಳಿ

ಮಂಗಳವಾರದಂದು ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಂಗಳೂರಿನ ಮಹದೇವಪುರ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ.

ಮಹದೇವಪುರದ ಹಾಲಿ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇನ್ನು ಲಂಚ ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಟಿಕೆಟ್ ಕೈ ತಪ್ಪುವುದು ನಿಶ್ಚಿತವಾಗಿದ್ದು, ಈ ಕ್ಷೇತ್ರದಲ್ಲಿ ಅವರ ಪುತ್ರ ಮಲ್ಲಿಕಾರ್ಜುನ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಕೂಡ ಯಡಿಯೂರಪ್ಪನವರನ್ನು ಭೇಟಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...