ಕಂಡಕ್ಟರ್ ಒಬ್ಬ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಟಿಕೆಟ್ ಜೊತೆ ತನ್ನ ಮೊಬೈಲ್ ನಂಬರ್ ಸಹ ಕೊಟ್ಟಿದ್ದು, ಇದರಿಂದ ಆಕ್ರೋಶಗೊಂಡ ಆಕೆಯ ತಾಯಿ ಮತ್ತು ಸಂಬಂಧಿಕರು ಹಿಗ್ಗಾಮುಗ್ಗಾ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೋಂದೆಲ್ ನಿಂದ ಮಂಗಳೂರಿಗೆ ತೆರಳುವ 19 ನಂಬರ್ ನ ಕೆನರಾ ಬಸ್ ಕಂಡಕ್ಟರ್ ಬಾಗಲಕೋಟೆ ಜಿಲ್ಲೆಯ ಲಿಂಗಾಪುರ ನಿವಾಸಿ ಮಂಜುನಾಥ ಈ ದುರ್ವರ್ತನೆ ತೋರಿದ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಂಟನೇ ತರಗತಿ ವಿದ್ಯಾರ್ಥಿನಿಗೆ ಮೊಬೈಲ್ ನಂಬರ್ ಕೊಟ್ಟಿದ್ದ ಎಂದು ಹೇಳಲಾಗಿದೆ. ಈ ವಿಷಯ ಆಕೆಯ ಪೋಷಕರಿಗೆ ತಿಳಿದುಬಂದಿದ್ದು, ಆತನಿಗೆ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.