alex Certify ಟಿಕೆಟ್ ವಿಚಾರವಾಗಿ ಜಗದೀಶ್ ಶೆಟ್ಟರ್ ವರಿಷ್ಠರೊಂದಿಗೆ ಮಾತನಾಡಿದ್ದಾರೆಂದ ಅಣ್ಣಾಮಲೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕೆಟ್ ವಿಚಾರವಾಗಿ ಜಗದೀಶ್ ಶೆಟ್ಟರ್ ವರಿಷ್ಠರೊಂದಿಗೆ ಮಾತನಾಡಿದ್ದಾರೆಂದ ಅಣ್ಣಾಮಲೈ

ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ವರಿಷ್ಠರ ಜೊತೆ ಮಾತನಾಡಿದ್ದಾರೆ ಎಂದು ಜಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಬೆಂಗಳೂರಲ್ಲಿ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಹಿರಿಯ ನಾಯಕರು, ಪಕ್ಷ ಸಂಘಟನೆ ಮಾಡಿದ್ದಾರೆ. ಕೆ.ಎಸ್. ಈಶ್ವರಪ್ಪ ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಲಿದ್ದಾರೆ.

ಟಿಕೆಟ್ ಸಿಗದಿದ್ದಾಗ ಅಸಮಾಧಾನಗೊಳ್ಳುವುದು ಸಹಜ. ನಾಯಕರು ಅಸಮಾಧಾನಗೊಂಡವರ ಮನವೊಲಿಕೆ ಮಾಡಲಿದ್ದಾರೆ ಎಂದರು.

ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಹುಬ್ಬಳ್ಳಿ- ಧಾರವಾಡ ಕೇಂದ್ರ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡದೇ ಕುತೂಹಲ ಹುಟ್ಟಿಸಿದೆ. ಈಗಾಗಲೇ ವರಿಷ್ಠರು ಜಗದೀಶ್ ಶೆಟ್ಟರ್ ಗೆ ಸ್ಪರ್ಧಿಸದಂತೆ ಸೂಚನೆ ನೀಡಿದ್ದು, ಶೆಟ್ಟರ್ ಮಾತ್ರ ರೆಬೆಲ್ ಆಗಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...