alex Certify ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ 2000 ರನ್ ಪೂರೈಸಿದ ಕ್ವಿಂಟನ್ ಡಿ ಕಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ 2000 ರನ್ ಪೂರೈಸಿದ ಕ್ವಿಂಟನ್ ಡಿ ಕಾಕ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಜಯ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ನಿಂದ ತಪ್ಪಿಸಿಕೊಂಡಿದೆ.

ಕ್ವಿಂಟನ್ ಡಿ ಕಾಕ್ ಹಾಗೂ ರೈಲಿ ರೂಸೋವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಬೃಹತ್ ಮೊತ್ತ ಕಲೆಹಾಕಲು ಸಹಾಯಕರಾದರು. ಭಾರತ ತಂಡ 2-1 ಮುನ್ನಡೆ ಟಿ ಟ್ವೆಂಟಿ ಸಿರೀಸ್ ತನ್ನದಾಗಿಸಿಕೊಂಡಿದೆ.

ನಿನ್ನೆಯ ಪಂದ್ಯದಲ್ಲಿ ಆರಂಭಿಕ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡದ ಗೆಲುವಿಗೆ ನೆರವಾದರು.

ಮತ್ತೊಂದೆಡೆ ಕ್ವಿಂಟನ್ ಡಿ ಕಾಕ್ ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 2000ರನ್ ಗಳ ಗಡಿ ಮುಟ್ಟಿದ್ದಾರೆ. 72 ಟಿಟ್ವೆಂಟಿ ಪಂದ್ಯಗಳನ್ನಾಡಿರುವ ಕ್ವಿಂಟನ್ ಡಿ ಕಾಕ್ ಇದುವರೆಗೂ 13 ಅರ್ಧಶತಕ ಸಿಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...