alex Certify ಟಿ ಟ್ವೆಂಟಿ ವಿಶ್ವಕಪ್ 2022; ಇಂದು ಶ್ರೀಲಂಕಾ ಹಾಗೂ ಇಂಗ್ಲೆಂಡ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ ಟ್ವೆಂಟಿ ವಿಶ್ವಕಪ್ 2022; ಇಂದು ಶ್ರೀಲಂಕಾ ಹಾಗೂ ಇಂಗ್ಲೆಂಡ್ ಮುಖಾಮುಖಿ

ಇಂದು ಸಿಡ್ನಿಯಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ ನ 39ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಹಾಗೂ ದಸುನ್ ಶನಾಕ ನಾಯಕತ್ವದ ಶ್ರೀಲಂಕಾ ಮುಖಾಮುಖಿಯಾಗಲಿದ್ದು, ಇಂಗ್ಲೆಂಡ್ ತಂಡ ಇಂದು ಗೆಲ್ಲಲೇಬೇಕಾಗಿದೆ. ಸೂಪರ್‌ 12ನ ಗ್ರೂಪ್ 1ರ ಕೊನೆಯ ಪಂದ್ಯ ಇದಾಗಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸೂಪರ್‌ 12 ನ ಗ್ರೂಪ್ 1ರಲ್ಲಿ ಈಗಾಗಲೇ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ 7 ಪಾಯಿಂಟ್ ಪಡೆದುಕೊಂಡಿದ್ದು ರನ್ ರೇಟ್ ನಿಂದ ನ್ಯೂಜಿಲೆಂಡ್ ತಂಡ ಮೂರನೇ ಸ್ಥಾನದಲ್ಲಿದೆ. 5 ಅಂಕಗಳನ್ನು ಪಡೆದಿರುವ ಇಂಗ್ಲೆಂಡ್ ತಂಡ ಇಂದು ಶ್ರೀಲಂಕಾ ವಿರುದ್ಧ ಗೆದ್ದು ಸೆಮಿಫೈನಲ್ ಕನಸನ್ನು ಜೀವಂತವಾಗಿಸಿಕೊಳ್ಳಬೇಕಾಗಿದೆ. ಇಂಗ್ಲೆಂಡ್ ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ರನ್ ರೇಟ್ ಆಧಾರದ ಮೇಲೆ ಸೆಮಿಫೈನಲ್ ಪ್ರವೇಶಿಸುವ ತಂಡವನ್ನು ಪ್ರಕಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...