ಶನಿವಾರದಿಂದ ಆರಂಭವಾಗಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿದ್ದು, ಈ ಹೈ ವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಮೆಲ್ಬೋರ್ನ್ ನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಕಳೆದ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ಎದುರು ಪರಾಭವಗೊಂಡಿದ್ದ ಭಾರತ ಆ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿದೆ.
ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ ಸುಮಾರು 90 ಸಾವಿರ ಮಂದಿ ಕ್ರಿಕೆಟ್ ಅಭಿಮಾನಿಗಳು ಮೈದಾನದಲ್ಲಿ ಹಾಜರಿರಲಿದ್ದಾರೆ.